ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಅಮಾಯಕರ ಮೇಲೆ ಹಲ್ಲೆ ಪ್ರಕರಣಕ್ಕೆ ಆಕ್ರೋಶಗೊಂಡಿರುವ ಅವರು, ಅತಿರೇಕದಿಂದ ವರ್ತಿಸಿದ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಎಂದು ಆಗ್ರಹಿಸಿದ್ದಾರೆ.
ಪೊಲೀಸರು ಹಾಗೂ ಅಧಿಕಾರಿಗಳು ಹೋರಾಟಗಾರರು ಹಾಗೂ ರೈತರೊಂದಿಗೆ ಸಂಯಮದಿಂದ ವರ್ತಿಸಬೇಕು. ಲಾಠಿ ಚಾರ್ಜ್ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಬಾರದು. ರಾಜ್ಯದಲ್ಲಿ ಮತ್ತೊಮ್ಮೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ.