ಮಚ್ಚಿನಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ!

ಬುಧವಾರ, 21 ಡಿಸೆಂಬರ್ 2016 (11:23 IST)
ಮಚ್ಚಿನಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಉದ್ಬಾಳದಲ್ಲಿ ವರದಿಯಾಗಿದೆ. 
ಉದ್ಬಾಳ ಗ್ರಾಮದ ಸ್ಥಳೀಯ ಮುಖಂಡ ಸಾಬಣ್ಣಗೌಡ (55) ಕೊಲೆಯಾದ ದುರ್ದೈವಿ. ಮನೆಯಲ್ಲಿ ಮಲಗಿದ್ದ ಸಾಬಣ್ಣಗೌಡ ಅವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
 
ಘಟನೆ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಶೋಧಕ್ಕಾಗಿ ಬಲೆ ಬೀಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ