ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ನಾಯಕರೇ ವಿರೋಧ ಯಾಕೆ ಗೊತ್ತಾ?
ಖೇಣಿ ಮೇಲೆ ನೈಸ್ ಹಗರಣ, ಭೂ ಹಗರಣ ಕಳಂಕವಿದೆ. ಹೀಗಿರುವಾಗ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಬಿಜೆಪಿ, ಜೆಡಿಎಸ್ ಗೆ ಪ್ರತಿಭಟನೆ ಮಾಡಲು ಅಸ್ತ್ರ ಸಿಕ್ಕಂತಾಗುತ್ತದೆ ಎಂದು ಬೆಂಗಳೂರಿನ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಲು ನಿರ್ಧರಿಸಿದ್ದಾರೆ.
ಶಾಸಕ ಬೈರತಿ ಬಸವರಾಜ್, ಮುನಿರತ್ನ, ಧರ್ಮಸಿಂಗ್ ಪುತ್ರ ಡಾ. ಅಜಯ್ ಕುಮಾರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಖೇಣಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.