ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಯಕರ ಮೇಲಾಟ
ಸೋಮವಾರ, 11 ಜೂನ್ 2018 (10:10 IST)
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಯಕರ ನಡುವೆ ಹಗ್ಗ ಜಗ್ಗಾಟ ಶುರುವಾಗಿದೆ.
ಡಿಸಿಎಂ ಜಿ ಪರಮೇಶ್ವರ್ ತಮ್ಮ ಆಪ್ತರಾದ ಕೆಎಚ್ ಮುನಿಯಪ್ಪ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ ಈಗಾಗಲೇ ದಲಿತರಿಗೆ ಉಪ ಮುಖ್ಯಮಂತ್ರಿ ಕೊಟ್ಟ ಕಾರಣ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಲಿತ ಸಮುದಾಯದವರಾದ ಮುನಿಯಪ್ಪರನ್ನು ಆಯ್ಕೆ ಮಾಡುವುದು ಅನುಮಾನ. ಹೀಗಾಗಿ ಹಿರಿಯ ನಾಯಕ, ಈಡಿಗ ಸಮುದಾಯಕ್ಕೆ ಸೇರಿದ ಬಿಕೆ ಹರಿಪ್ರಸಾದ್ ಪರ ಡಿಕೆ ಶಿವಕುಮಾರ್ ಮತ್ತು ಪರಮೇಶ್ವರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಹಿಂದೆ ಕಾರ್ಯಾಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ತಮಗೇ ಅಧ್ಯಕ್ಷ ಪಟ್ಟ ಸಿಗಬೇಕೆಂದು ಹೈಕಮಾಂಡ್ ಮುಂದೆ ಲಾಬಿ ನಡೆಸಿದ್ದಾರೆ. ಅತ್ತ ಕಳೆದ ಬಾರಿ ಯಶಸ್ವಿಯಾಗಿ ಐದು ವರ್ಷ ಸರ್ಕಾರ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರೂ ಈ ಸ್ಥಾನಕ್ಕೆ ಕೇಳಿಬರುತ್ತಿದೆ. ಜೂನ್ 14 ರ ನಂತರ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.