ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕ

ಭಾನುವಾರ, 24 ನವೆಂಬರ್ 2019 (11:10 IST)
ಬೆಳಗಾವಿ : ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ನಾಯಕರೊಬ್ಬರು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಇದೀಗ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.




ಹೌದು. ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಕಾಶ್ ಹುಕ್ಕೇರಿ  ಇಂದು ಹೋಟೆಲ್ ನಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಹಾಗೂ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.


ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಇದೀಗ ಪ್ರಕಾಶ ಹುಕ್ಕೇರಿ  ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ