ಧ್ರುವನಾರಾಯಣ್ ನಿಧನಕ್ಕೆ ಕಾಂಗ್ರೆಸ್ ಮುಖಂಡರಿಂದ ಸಂತಾಪ

ಶನಿವಾರ, 11 ಮಾರ್ಚ್ 2023 (11:41 IST)
ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
 
ಧ್ರುವನಾರಾಯಣ ನಿಧನದಿಂದ ತೀವ್ರ ದುಃಖ ಮತ್ತು ನೋವಾಗಿದೆ. ಅವರು ಕೇವಲ ತಳಮಟ್ಟದ ರಾಜಕೀಯ ವ್ಯಕ್ತಿಯಾಗಿರಲಿಲ್ಲ, ಅತ್ಯುತ್ತಮ ವ್ಯಕ್ತಿಯಾಗಿದ್ದರು.

ಅವರ ನಿಧನವು ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ನಷ್ಟವಲ್ಲ. ನನಗೂ ವೈಯಕ್ತಿಕವಾಗಿ ದೊಡ್ಡ ನಷ್ಟವಾಗಿದೆ ಎಂದು ಧ್ರುವನಾರಾಯಣ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ