‘ನಾನು ತಪ್ಪು ಮಾಡಿಲ್ಲ, ನಾನು ರಾಜೀನಾಮೆ ಕೊಡಲ್ಲ’
ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ, ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 40% ಆರೋಪದ ವಿರುದ್ಧ ನಾಣು ಸಂತೋಷ್ ವಿರುದ್ಧ ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದೆ. ಕೋರ್ಟ್‍ನಿಂದ ನೋಟಿಸ್ ಹೋದ ನಂತರ ಭೀತಿಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದೇ ನನಗೆ ಗೊತ್ತಿಲ್ಲ ಎಂದು ಹೇಳಿದರು. ಉಡುಪಿಯ ಶಾಂಭವಿ ಲಾಡ್ಜ್ನಲ್ಲಿ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ಅವರು ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ್ದ ಸಂದೇಶ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿ ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.