ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಕಾಂಗ್ರೆಸ್ ನಾಯಕರು

ಮಂಗಳವಾರ, 3 ಜನವರಿ 2023 (13:39 IST)
ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡು  ಸಾವನಾಪ್ಪಿದ್ದು , 6 ಜನರ ಹೆಸರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ರು.ಇಂದು ಅವರ ಮನೆಗೆ ಸಂತ್ವಾನ ತುಂಬಲು ಕಾಂಗ್ರೆಸ್ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ , ರಣದೀಪ್ ಸುರ್ಜೆವಾಲ ಭೇಟಿ ನೀಡಿ ಸಂತ್ವಾನ ತುಂಬಿದ್ರು
 
ಈ ವೇಳೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ ಸಿದ್ದರಾಮಯ್ಯ ಹಾಗೂ ರಾಮಲಿಂಗ ರೆಡ್ಡಿ ಜೊತೆಗೆ ಭೇಟಿ ನೀಡಿದ್ದೇವೆ.ರಿಪೇರಿ ಮಾಡಲಾಗದಷ್ಟು ನೋವಾಗಿದೆ ಪ್ರದೀಪ್ ಕುಟುಂಬಕ್ಕೆ.ದುರಂತ್ಯ ಅಂತ್ಯವಾಗಿರುವ ಪ್ರದೀಪ್ ಕುಟುಂಬಕ್ಕೆ ದುಃಖ ಹಂಚಿಕೊಳ್ಳಲು ಬಂದಿದ್ದೇವೆ .ಅತಿರೇಕದ ನಿರ್ಧಾರ ಪ್ರದೀಪ್ ತೆಗೆದುಕೊಂಡಿದ್ದಾರೆ.ಸಂತೋಷ್ ಪಾಟೀಲ್, ಪ್ರದೀಪ್, ಪ್ರಸಾದ್ ಇವೆಲ್ಲ ಕೇವಲ ಹೆಸರುಗಳಲ್ಲ.ಭ್ರಷ್ಟ ಸರ್ಕಾರದಿಂದ ಆಗುತ್ತಿರುವ ಸಾವುಗಳು.೪೦% ಕಮಿಷನ್ ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ.ಸಂತೋಷ್ ಪಾಟೀಲ್ ಕೂಡ ಬಿಜೆಪಿ ಲೀಡರ್ ಆಗಿದ್ದ ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು.ಪ್ರಸಾದ್ ಸಾವಿಗೂ ಹಣಕಾಸಿನ ಸಮಸ್ಯೆಯೇ ಕಾರಣವಾಗಿತ್ತು.ಬಿಜೆಪಿ ನಾಯಕರು ಯಾಕೆ ಹಣಕಾಸಿನ ವ್ಯವಹಾರಗಳಲ್ಲಿ ತಲೆ ಹಾಕ್ತಿದ್ದಾರೆ?ಪ್ರದೀಪ್ ಸಾವು ಆತ್ಮ ಹತ್ಯೆ ಅಲ್ಲ, ಅದೊಂದು ಕೊಲೆ.ಇವರ ಮಗಳ ಹೆಂಡತಿ ಯ ಕಣ್ಣೀರು ಒರೆಸುವುದಕೆ ಸರ್ಕಾರದ ಕೈಲಿ ಸಾಧ್ಯ ಇದೆಯಾ?ಭ್ರಷ್ಟಾಚಾರದಿಂದಾಗಿಯೇ ಇದೆಲ್ಲ ಆಗ್ತಾ ಇದೆ.ಪ್ರದೀಪ್ ಕೊಲೆಗೆ ಕಾರಣ ಆದವರಿಗೆ ಸರ್ಕಾರ ಶಿಕ್ಷೆ ಕೊಡಬೇಕು.ಅದು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಅವರಿಗೆ ಶಿಕ್ಷೆ ಆಗಬೇಕು.ಅವರನ್ನು ಬಂಧಿಸಬೇಕು ಕಂಬಿ ಹಿಂದೆ ಕಳಿಸಬೇಕು ಎಂದು ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ