ಕಾಂಗ್ರೆಸ್ ಮುಖಂಡರಿಂದ ಸಿದ್ದು-ಡಿಕೆಗೆ ಇನ್ನಷ್ಟು ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥನೆ

ಶುಕ್ರವಾರ, 19 ಮೇ 2023 (16:11 IST)
ಕರ್ನಾಟಕದ ನೂತನ ಸಿಎಂ ಹಾಗೂ ಡಿಸಿಎಂ ಆಯ್ಕೆ ಹಿನ್ನೆಲೆ ಸಿದ್ದರಾಮಯ್ಯ ಹಾಗೂ ಡಿಕೆಶಿ  ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಲಾಗಿದೆ.ಬೆಂಗಳೂರಿನ ಭಗವಾನ್ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆಯನ್ನ ಕಾಂಗ್ರೆಸ್ ಕಾರ್ಯಕರ್ತರು ಮಾಡಿಸಿದ್ದಾರೆ. ಇಬ್ಬರೂ ನಾಯಕರ ಹೆಸರಿನಲ್ಲಿ ಪೂಜೆ ಮಾಡಿಸಿದ್ದು,ಪೂಜೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.ಕಾಂಗ್ರೆಸ್ ಮುಖಂಡರಿಂದ ಸಿದ್ದು-ಡಿಕೆಗೆ ಇನ್ನಷ್ಟು ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ