ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಚಿವರ ಮೀಟಿಂಗ್
ವಿಧಾನಸೌಧದಲ್ಲಿ ಈಗಾಗಲೇ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಕಾಂಗ್ರೆಸ್ ಶಾಸಕರು, ಸಚಿವರು ಇದೇ ಮೊದಲ ಬಾರಿಗೆ ಬಜೆಟ್ ನಂತರ ಸಭೆ ಸೇರುತ್ತಿದ್ದಾರೆ.
ಈ ಸಭೆಯಲ್ಲಿ ಮೊನ್ನೆಯಷ್ಟೇ ಸಿಎಂ ಕುಮಾರಸ್ವಾಮಿ ಮಂಡಿಸಿದ ಬಜೆಟ್ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಯಿದೆ. ಕರಾವಳಿ, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕಕ್ಕೆ ಎಷ್ಟೆಷ್ಟು ಅನುದಾನ ಸಿಕ್ಕಿದೆ, ಯಾವ ಶಾಸಕರ ಕ್ಷೇತ್ರಕ್ಕೆ ಎಷ್ಟು ಕೊಡುಗೆ ಸಿಕ್ಕಿದೆ ಎನ್ನುವುದರ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.