ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನಳೀನಕುಮಾರ ಕಟೀಲ್

ಸೋಮವಾರ, 6 ಜೂನ್ 2022 (14:43 IST)
ರಾಜ್ಯದಲ್ಲಿ ನಡೆದ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ. ಆರ್‌ಎಸ್‌ಎಸ್ ಒಂದು ಸೇವಾ ಸಂಸ್ಥೆ. ದೇಶಭಕ್ತರನ್ನ ನಿರ್ಮಾಣ ಮಾಡುವ ಸಂಸ್ಥೆ ಆರ್‌ಎಸ್‌ಎಸ್. ಇದಕ್ಕೆ ಕೈ ಹಾಕಿದ ನೆಹರು ಮತ್ತು ಇಂದಿರಾ ಗಾಂಧಿ ಸುಟ್ಟು ಹೋಗಿದ್ದಾರೆ. ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ.ಸಿದ್ದರಾಮಯ್ಯ ಚಡ್ಡಿಗೆ ಬೆಂಕಿ ಹಾಕಲು ಹೇಳಿದ್ದಾರೆ, ಅವರೇ ಸುಟ್ಟು ಹೋಗುತ್ತಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಅತಂತ್ರ ಸ್ಥಿತಿಯನ್ನು ಉಂಟು ಮಾಡಲು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸಕ್ಕೆ ಮುಂದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ.  ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ.
ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ಧರಾಮಯ್ಯ ಬೆಂಬಲ ಮಾಡಲ್ಲ. ಅವರು ಎಲ್ಲಾ ವಿಚಾರದಲ್ಲಿ ಮಾತನಾಡಬೇಕು ಅಂತ ಮಾತನಾಡತ್ತಾರೆ. ಕಾಂಗ್ರೆಸ್‌ಗೆ ಹಿಂದುಗಳ ಮತ ಬೇಡ ‌ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ. ಜೆಡಿಎಸ್ ಮುಸ್ಲಿಂ ಮತಗಳನ್ನ ಓಲೈಕೆ ಮಾಡಲಿಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಪಠ್ಯ ಪುಸ್ತಕದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ.  ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಪಠ್ಯ ಪುಸ್ತಕದಲ್ಲಿ ತಪ್ಪುಗಳಿದ್ದರೆ ತಿದ್ದುವುದಾಗಿ ಸರ್ಕಾರ ಹೇಳಿದೆ ಎಂದರು.
ಶ್ರೀರಾಮಸೇನೆಯಿಂದ ಮೈಕ್ ವಿಚಾರವಾಗಿ‌ ಎರಡನೇ ಹಂತದ ಹೋರಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಸಂಘಟನೆಗಳಿಗೆ ಪ್ರತಿಭಟನೆ ಮಾಡುವ ಅಧಿಕಾರವಿದೆ. ಅವರು ಮಾಡಲಿ ಆದರೆ ಅವರ ಅಜೆಂಡಾಗಳಿಗೆ ನಾವು ಮನ್ನಣೆ ನೀಡಲು ಆಗಲ್ಲ. ಹಿಂದೂಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದಿವಿ ಅದಕ್ಕೆ ಬದ್ಧವಾಗಿ ದೇಶದಲ್ಲಿ ಹಲವಾರು ಕಾಯ್ದೆ ತಂದಿವಿ. ಆದರೆ ನಮ್ಮದು ಸರ್ವೇ ಜನ ಸುಖಿನೋ ಭವಂತು ಎನ್ನುವ ತತ್ವ ನಮ್ಮದು. ಒಂದು ಸರ್ಕಾರದಲ್ಲಿದ್ದಾಗ ಸಂವಿಧಾನ ಪಆಧಾರದ ಮೇಲೆ ಕೆಲಸ ಮಾಡಬೇಕು. ಆ ಕೆಲಸವನ್ನು ನಮ್ಮ ಸರ್ಕಾರ  ಮಾಡುತ್ತಿದೆ ಎಂದರು. ಇದೇ ವೇಳೆ ರಾಜ್ಯ ಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳು ಗೆಲ್ತಾರೆ ಕಾದು ನೋಡಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ