ನೋಟು ನಿಷೇಧವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಸಚಿವ

ಶನಿವಾರ, 31 ಡಿಸೆಂಬರ್ 2016 (14:56 IST)
ದೇಶಾದ್ಯಂತ 500, 1000 ಮುಖಬೆಲೆಯ ನೋಟುಗಳ ನಿಷೇಧಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕರು ಪ್ರಬಲವಾಗಿ ವಿರೋಧಿಸುತ್ತಿರುವುದು ಎಲ್ಲರಿಗೂ ತಿಳಿದಿರುವುದೇ. ಆದರೆ, ಕಾಂಗ್ರೆಸ್ ಹಿರಿಯ ನಾಯಕ, ಆರೋಗ್ಯ ಸಚಿವ ರಮೇಶ್ ಕುಮಾರ್, ಪ್ರಧಾನಿ ಮೋದಿ ನಡೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ತಮ್ಮ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಬೆಂಗಳೂರು ನಗರದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಉದ್ದೇಶವನ್ನಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಗರಿಷ್ಠ ಬೆಲೆಯ ನೋಟುಗಳನ್ನು ರದ್ದುಗೊಳಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.
 
ನೋಟು ನಿಷೇಧದಿಂದ ದೇಶಕ್ಕೆ ಒಳ್ಳೆಯದಾಗುವುದಾದರೆ ಇನ್ನೂ ಸ್ವಲ್ಪ ದಿನ ಕಾಯುವುದು ಉತ್ತಮ. ನೋಟ್ ಬ್ಯಾನ್ ವಿಚಾರದಲ್ಲಿ ಇಷ್ಟು ಬೇಗ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.
 
ದೇಶಾದ್ಯಂತ ಏಕಾಏಕಿ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸಿದ್ದಾರೆಯೋ, ಅದೇ ರೀತಿಯ ಕಷ್ಟ ನನಗೂ ಆಗಿದೆ. ನೋಟ್ ಬ್ಯಾನ್‌ನಿಂದ ಸಮಸ್ಯೆ ಆಗಿರುವುದು ನಿಜ. ಆದರೆ, 50 ದಿನಗಳಲ್ಲಿ ಎಲ್ಲವನ್ನೂ ಸರಿ ಮಾಡುವುದು ಕಷ್ಟ. ಸ್ಪಲ್ಪ ದಿನ ಕಾಯೋಣ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ