ಕಳೆದ ಬಾರಿ ನಿಗಮ ಮಂಡಳಿಗಳಲ್ಲಿ ಶಾಸಕರಿಗೆ ಸ್ಥಾನ ನೀಡಿರಲಿಲ್ಲ. ಆದರೆ, ಈ ಬಾರಿ ಶಾಸಕರಿಗೆ ಮಾಜಿ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಚಿವ ಸ್ಥಾನ ತಪ್ಪಿಸಿಕೊಂಡಿರುವ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿಯೇ ದೆಹಲಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಚರ್ಚೆ ನಡೆಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮುಖಂಡರಾದ ಕುಮಾರ ಬಂಗಾರಪ್ಪ ಮತ್ತು ಬಿ.ಸಿ. ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವಂತೆ ಮನವಿ ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ