ಬಳ್ಳಾರಿ, ಹೊಸಪೇಟೆ, ಸಂಡೂರು ಮೊದಲಾದ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಭಾರೀ ಪ್ರಮಾಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010 ರ ಮಾರ್ಚ್ ನಲ್ಲಿ ಅರಣ್ಯ ಇಲಾಖೆ 350 ಕೋಟಿ ಮೌಲ್ಯದ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಅದಿರನ್ನು ಕಾಯಲು ಬೇಲೇಕೇರು ಬಂದರು ನಿರ್ವಹಿಸುತ್ತಿದ್ದ ಬಂದರು ಇಲಾಖೆಗೆ ಅರಣ್ಯ ಇಲಾಖೆ ಸೂಚಿಸಿತ್ತು. ಆದರೆ ಎರಡು ತಿಂಗಳ ಬಳಿಕ ಪರಿಶೀಲಿಸಿದಾಗ ಅಲ್ಲಿ 250 ಕೋಟಿ ರೂ. ಮೌಲ್ಯದ ಅದಿರು ನಾಪತ್ತೆಯಾಗಿದ್ದು ಬೆಳಕಿಗೆ ಬಂತು. 2011 ರಲ್ಲಿ ಈ ಪ್ರಕರಣದ ವಿಚಾರಣೆಯನ್ನು ಸಿಬಿಐ ಕೈಗೊಪ್ಪಿಸಲಾಗಿತ್ತು. ಈ ತನಿಖೆ ವೇಳೆ ಸತೀಶ್ ಮಾಲಿಕತ್ವದ ಕಂಪನಿ ಸುಮಾರು 7.23 ಲಕ್ಷ ಮೆಟ್ರಿಕ್ ಅದಿರನ್ನು ವಿದೇಶಕ್ಕೆ ಅಕ್ರಮವಾಗಿ ರಫ್ತು ಮಾಡಿರುವುದು ಬೆಳಕಿಗೆ ಬಂದಿತ್ತು.