ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕಾಂಗ್ರೆಸ್, ಅವಿಶ್ವಾಸ ನಿರ್ಣಯದ ಪರವಾಗಿ 36 ಮತಗಳು ಬಿದ್ದರೆ, ಅವಿಶ್ವಾಸ ನಿರ್ಣಯದ ವಿರುದ್ಧವಾಗಿ 37 ಮತಗಳು ಬಂದಿದ್ದರಿಂದ ಸೋಲನುಭವಿಸಬೇಕಾಯಿತು.
ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಬಿಜೆಪಿ ಪರವಾಗಿ ಮತಹಾಕಿದರು. ನಿನ್ನೆಯಿಂದಲೇ ಕಾಂಗ್ರೆಸ್, ಜೆಡಿಎಸ್ , ಬಿಜೆಪಿ ಪಕ್ಷಗಳು ತಮ್ಮದೇ ಆದ ರಾಜಕೀಯ ರಣತಂತ್ರ ರೂಪಿಸುವಲ್ಲಿ ನಿರತವಾಗಿದ್ದವು.
ಅವಿಶ್ವಾಸ ನಿರ್ಣಯ ಮಂಡಿಸಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಹಿರಿಯ ನಾಯಕರು ವಿ.ಎಸ್.ಉಗ್ರಪ್ಪ ವಿರುದ್ಧ ಅಸಮಾದನ ವ್ಯಕ್ತಪಡಿಸಿ, ಅವಿಶ್ವಾಸ ನಿರ್ಣಯ ಮಂಡನೆಗೆ ಮುನ್ನ ಪೂರ್ವ ಸಿದ್ದತೆ ನಡೆಸಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.