ಕಾಂಗ್ರೆಸ್ ಹೋರಾಟದಿಂದಲೇ ಭಾರತಕ್ಕೆ ಸ್ವಾತಂತ್ರ್ಯ: ಸಚಿವ ಕಾಗೋಡು ತಿಮ್ಮಪ್ಪ
ಬುಧವಾರ, 24 ಆಗಸ್ಟ್ 2016 (11:10 IST)
ಕಾಂಗ್ರೆಸ್ ಹೋರಾಟದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೋರಾಟದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು. ಸ್ವಾತಂತ್ರ್ಯ ಹೋರಾಟದಲ್ಲಿ ಯಾರು ಎಷ್ಟು ತ್ಯಾಗ ಮಾಡಿದ್ದಾರೆ ಎಂದು ಕಾಂಗ್ರೆಸ್‌ಗೆ ಗೊತ್ತು ಎಂದು ತಿಳಿಸಿದರು.
ಬೆಂಗಳೂರಿನ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವುದನ್ನು ನಾನು ಕಂಡಿಲ್ಲ. ನನಗೆ ಗೊತ್ತಿಲ್ಲದ ವಿಷಯದ ಕುರಿತು ಉತ್ತರ ನೀಡುವುದಿಲ್ಲ ಎಂದರು.
ದೇಶದ ಮುಂದೆ ಹಲವು ಸಮಸ್ಯೆಗಳಿವೆ. ಮೊದಲು ಈ ಕುರಿತು ಮಾತನಾಡಿ. ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ