ಕಾಂಗ್ರೆಸ್ ಅಪರೇಷನ್ ಸಕ್ಸಸ್: 'ಕೈ' ಹಿಡಿದ ಬಿಜೆಪಿ ಸಂಸದ ಸಂಗಣ್ಣ ಕರಡಿ

Sampriya

ಬುಧವಾರ, 17 ಏಪ್ರಿಲ್ 2024 (14:05 IST)
Photo Courtesy X
ಬೆಂಗಳೂರು: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ  ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬೀದರ್‌ನಿಂದ ಟಿಕೆಟ್ ಮಿಸ್‌ ಆಗಿದ್ದರಿಂದ ಬೇಸರಗೊಂಡಿದ್ದ ಸಂಗಣ್ಣ ಕರಡಿ ಅವರು ರಾಜ್ಯ ನಾಯಕರ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದರು.  

ಅದಲ್ಲದೆ ಸಂಗಣ್ಣ ಅವರ ಮನವೊಲಿಸಲು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್ ಪ್ರಯತ್ನಿಸಿದರೂ  ಯಾವುದಕ್ಕೂ ಅವರು ಬಗ್ಗಲಿಲ್ಲ.

ಇದರ ಬೆನ್ನಲ್ಲೇ ಕಾಂಗ್ರೆಸ್ ಸಂಗಣ್ಣ ಅವರನ್ನು ಸೆಳೆಯುವ ಪ್ರಯತ್ನ ನಡೆಸಿದ್ದು, ಇದೀಗ ಸಕ್ಸಸ್ ಆಗಿದೆ.

ಇನ್ನು ಸಂಗಣ್ಣ ಕರಡಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಶಾಸಕ ಲಕ್ಷ್ಮಣ ಸವದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಂಗಣ್ಣ ಕರಡಿ ಜೊತೆಗೆ ಅವರು ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಇದರ ಫಲವಾಗಿ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆಯಾದರು.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಂಗಣ್ಣ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ