ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲದೇ ದರಿದ್ರ ಬಂದಿದೆ: ಕುಮಾರಸ್ವಾಮಿ
ಶನಿವಾರ, 18 ಫೆಬ್ರವರಿ 2017 (14:52 IST)
ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲದೇ ದರಿದ್ರ ಬಂದಿದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಒಂದು ವೇಳೆ, ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳಿದ್ದರೆ ಯಾಕೆ ನಮ್ಮ ಪಕ್ಷದ ಕಳಲೆ ಕೇಶವಮೂರ್ತಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು? ಕಳಲೆ ಕೇಶವಮೂರ್ತಿಗೆ ಬೆಂಬಲ ನೀಡುವ ಯಾವುದೇ ಭರವಸೆ ನೀಡಿಲ್ಲ. ಆಪರೇಶನ್ ಹಸ್ತ, ಆಪರೇಶನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಿವೆ ಎಂದು ಟೀಕಿಸಿದರು.
ಎರಡು ಕ್ಷೇತ್ರಗಳಲ್ಲಿ ಯಾವುದೇ ಕ್ಷಣಗಳಲ್ಲಿ ಚುನಾವಣೆ ಎದುರಾಗಬಹುದಾಗಿದೆ. ಆದ್ದರಿಂದ, ಆ ಎರಡು ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಪಡೆದಿದ್ದೇನೆ. ಅದರಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯವನ್ನು ಲೂಟಿ ಹೊಡೆಯುವುದರಲ್ಲಿಯೇ ಕಾಲ ಕಳೆಯುತ್ತಿವೆ. ಎರಡೂ ಪಕ್ಷಗಳಿಗೆ ಕಿಂಚಿತ್ತಾದರೂ ಜನಪರ ಕಾಳಜಿಯಿಲ್ಲ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.