ಕಾಂಗ್ರೆಸ್ ಪಕ್ಷ ಎಲ್ಲಿದೆ, ಅದು ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ: ಕೃಷ್ಣ

ಸೋಮವಾರ, 3 ಏಪ್ರಿಲ್ 2017 (14:01 IST)
ಕಾಂಗ್ರೆಸ್ ಪಕ್ಷ ಇದೀಗ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ. ಎಲ್ಲಾ ಕಡೆ ಕಾಂಗ್ರೆಸ್ ಧೂಳಿಪಟವಾಗಿದೆ. ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕಾಟ ನಡೆಸುವ ಸಮಯ ಬಂದಿದೆ ಎಂದು ಮಾಜಿ ಸಿಎಂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಲೇವಡಿ ಮಾಡಿದರು.
 
ಪ್ರಧಾನಿ ಮೋದಿಯವರ ಪಾರದರ್ಶಕ ಅಡಳಿತದಿಂದಾಗಿ ದೇಶದ ಜನತೆ ಬಿಜೆಪಿಯತ್ತ ಆಕರ್ಷಿಸುತ್ತಿದ್ದಾರೆ. ಮೋದಿಯವರ ಕೈ ಬಲಪಡಿಸಲು ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಮತ ನೀಡಬೇಕು ಎಂದು
 
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಬೇರೆ ಕಾರಣಕ್ಕೆ ನಡೆಯುತ್ತಿರುವುದರಿಂದ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ ಎಂದು ಹೇಳಿದ್ದಾರೆ.
 
ನಂಜನಗೂಡು ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ಕೃಷ್ಣ ಮಾತನಾಡಿ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡಿದ್ದರಿಂದ ಚುನಾವಣೆ ನಡೆಯುತ್ತಿದೆ. ಗುಂಡ್ಲುಪೇಟೆಯಲ್ಲಿ ಮಾಜಿ ಸಚಿವ ಮಹದೇವ್ ಪ್ರಸಾದ್ ನಿಧನದ ಕಾರಣಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ