ಯಾರೆಲ್ಲಾ ಕಾಂಗ್ರೆಸ್‌ಗೆ ಬರ್ತಾರೆ ಎಂದು ಕಾದು ನೋಡಿ: ಪರಮೇಶ್ವರ್

ಶುಕ್ರವಾರ, 3 ಮಾರ್ಚ್ 2017 (14:48 IST)
ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಾಮಾನ್ಯ. ಕಾಂಗ್ರೆಸ್ ಪಕ್ಷಕ್ಕೆ ಬರುವವರ ಸಂಖ್ಯೆ ದೊಡ್ಡದಿದೆ ಯಾರೆಲ್ಲಾ ಕಾಂಗ್ರೆಸ್‌ಗೆ ಬರ್ತಾರೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಕುಮಾರ ಬಂಗಾರಪ್ಪ ಕಾಂಗ್ರೆಸ್ ಪಕ್ಷ ತ್ಯಜಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯಲ್ಲಿ ಇದೆಲ್ಲಾ ಸಹಜ. ಕಾಂಗ್ರೆಸ್ ಪಕ್ಷಕ್ಕೆ ಸೇರಲು ತುಂಬಾ ನಾಯಕರು ಕಾತುರರಾಗಿದ್ದಾರೆ. ಆದರೆ, ಯಾರೆಲ್ಲಾ ಬರುತ್ತಾರೆ ಎಂದು ಇಗಲೇ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
 
ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರ ರಹಿತ ಸರಕಾರವಾಗಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಅನೇಕ ಜನಪರ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.
 
ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇವೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ