ಪಕ್ಷೇತರ ಶಾಸಕರಿಗೆ ಕಾಂಗ್ರೆಸ್ ಹಣದ ಆಮಿಷ: ಶೆಟ್ಟರ್

ಸೋಮವಾರ, 6 ಜೂನ್ 2016 (14:31 IST)
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಪಕ್ಷೇತರ ಶಾಸಕರ ರೆಸಾರ್ಟ್ ವಾಸ್ತವ್ಯ ದುರ್ದೈವ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ ಶಾಸಕರೇ ಮುಂಬೈಗೆ ತೆರಳಿದ್ದಾರೆ. ಇವರಿಗೆ ಕಾಂಗ್ರೆಸ್ ಹಣದ ಆಮಿಷ ಒಡ್ಡಿದೆ. ಈ ಪ್ರಕರಣವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
 
ರಾಜಕೀಯ ಒತ್ತಡದಿಂದ ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಯವರು ಗೊತ್ತೆ ಇಲ್ಲ ಎಂದು ಬೇಜವಾಬ್ದಾರಿಯ ಉತ್ತರ ನೀಡುತ್ತಾರೆ. ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯದಲ್ಲಿ ಸಣ್ಣ ಬೆಳವಣಿಗೆಯಾದರು ನನ್ನ ಗಮನಕ್ಕೆ ಬರುತ್ತಿತ್ತು. ಇಗಲಾದ್ರೂ ಮುಖ್ಯಮಂತ್ರಿ ಅವರು ಗೃಹ ಸಚಿವರು ಮಾತನಾಡುವ ಸಮಯ ಬಂದಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ