ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್

Krishnaveni K

ಶನಿವಾರ, 7 ಮಾರ್ಚ್ 2026 (13:24 IST)
ಬೆಂಗಳೂರು: ದೇಶದಾದ್ಯಂತ ಗೃಹ ಬಳಕೆ ಸಿಲಿಂಡರ್ ಬೆಲೆ 60 ರೂ. ಏರಿಕೆಯಾಗುತ್ತಿದ್ದಂತೇ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ಇಂದು ವಿಶಿಷ್ಟ ಪ್ರತಿಭಟನೆ ಮಾಡಿದೆ.
 

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಸಹಜವಾಗಿಯೇ ಭಾರತದಲ್ಲಿ ಈಗ ಎಲ್ ಪಿಜಿ ದರ ಏರಿಕೆಯಾಗಿದೆ. ಇಂದು ವಾಣಿಜ್ಯ ಮತ್ತು ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡಿದೆ.

‘ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರಗಳಲ್ಲಿ ಮತ್ತೊಮ್ಮೆ ಪರಿಷ್ಕರಣೆ ಮಾಡಿ, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ₹60 ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹115 ರಷ್ಟು ಹೆಚ್ಚಳ ಮಾಡಿರುವುದು ದೇಶದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಭಾರೀ ಹೊರೆ ಹಾಕಿದಂತಾಗಿದೆ.

ಈಗಾಗಲೇ ದುಬಾರಿ ಬೆಲೆಯಿಂದ  ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ. 2014ರಿಂದ 2025ರ ಅವಧಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಸಂಭವಿಸಿರುವ ನಿರಂತರ ಏರಿಕೆ ಸಾಮಾನ್ಯ ಕುಟುಂಬಗಳ ಜೀವನವನ್ನು ದುಬಾರಿಯಾಗಿಸಿದ್ದು, ಸಬ್ಸಿಡಿ ವ್ಯವಸ್ಥೆಯನ್ನು ಕ್ರಮೇಣ ಕಡಿಮೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಸರ್ಕಾರ ಆರ್ಥಿಕ ಹೊರೆ ಹಾಕಿರುವುದು ಅತ್ಯಂತ ಖಂಡನೀಯ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಚುನಾವಣೆಯ ಮುನ್ನ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಅವಶ್ಯಕ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ ನಂತರ ಬೆಲೆ ಏರಿಕೆ ಮಾಡುವುದು ನರೇಂದ್ರ ಮೋದಿ ರವರ ತಂತ್ರಗಾರಿಕೆಯಾಗಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ