ಕಾಂಗ್ರೆಸ್‌ನಿಂದ ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶುಕ್ರವಾರ, 4 ಆಗಸ್ಟ್ 2017 (13:38 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲಿನ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಪಕ್ಷದ ಮಾನವ ಹಕ್ಕುಗಳ ವಿಭಾಗದ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
 
ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
 
ಸಚಿವ ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಗುಜರಾತ್ ಶಾಸಕರನ್ನು ಬೆದರಿಸಲು ಮತ್ತು ರಾಜ್ಯದ ಕಾಂಗ್ರೆಸ್ ನಾಯಕರ ಮಾನಹಾನಿ ಮಾಡಲು ದಾಳಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಗುಜರಾತ್ ರಾಜ್ಯಸಭೆ ಮತ್ತು ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ಬಿಜೆಪಿ ಹೈಕಮಾಂಡ್ ಷಡ್ಯಂತ್ರ ರೂಪಿಸಿದೆ ಎಂದು ಕಾಂಗ್ರೆಸ್ ಮುಖಂಡರು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ