ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ : ಸಿ ಫೋರ್ ಸಮೀಕ್ಷೆ

ಸೋಮವಾರ, 26 ಮಾರ್ಚ್ 2018 (19:40 IST)
ಸಿ ಫೋರ್ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ 126 ಕ್ಷೇತ್ರಗಳಲ್ಲಿ ಜಯಗಳಿಸಿ ಭಾರಿ ಬಹುಮತದಿಂದ ಮತ್ತೆ ಸರಕಾರ ರಚಿಸಲಿದೆ ಎಂದು ಹೇಳಿದೆ.
ರಾಜ್ಯದ ಪ್ರತಿಯೊಂದು ಜಿಲ್ಲೆ, ಪಟ್ಟಣ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ 22,357 ಮತದಾರರನ್ನು ಭೇಟಿ ಮಾಡಿ ಸಮೀಕ್ಷೆ ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷ ಮತ್ತೆ ಸರಕಾರ ರಚಿಸುವುದು ಬಹುತೇಕ ಖಚಿತ ಎಂದು ತಿಳಿಸಿದೆ. 
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೇ.46 ರಷ್ಟು ಮತಗಳನ್ನು ಪಡೆಯಲಿದ್ದು, ವಿಪಕ್ಷವಾದ ಬಿಜೆಪಿ ಮತ್ತು ಜೆಡಿಎಸ್ ಕ್ರಮವಾಗಿ ಶೇ.31 ಮತ್ತು ಶೇಕಡಾ 16 ರಷ್ಟು ಮತಗಳನ್ನು ಪಡೆಯಲಿವೆ ಎಂದು ಸಮೀಕ್ಷೆಯಲ್ಲಿ ಸ್ಪಷ್ಟಪಡಿಸಿದೆ.
 
ಸಿಫೋರ್ ಸಂಸ್ಥೆ ಕಳೆದ 2013 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 119 ರಿಂದ 120 ಸೀಟುಗಳು ಪಡೆಯಬಹುದು ಎಂದು ಸಮೀಕ್ಷೆಯಲ್ಲಿ ಬಹಿರಂಗಪಡಿಸಿತ್ತು. ಕಾಂಗ್ರೆಸ್ ಪಕ್ಷ 122 ಸೀಟುಗಳನ್ನು ಗೆದ್ದು ಸರಕಾರ ರಚಿಸಿತ್ತು.
 
ಕಳೆದ 2013ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಹೋಲಿಸಿದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ. ಬಿಜೆಪಿ ಕೂಡಾ ತನ್ನ ಸ್ಥಾನವನ್ನು ಹೆಚ್ಚಿಸುವ ಸಾಧ್ಯತೆಗಳಿವೆ. ಆದರೆ, ಜೆಡಿಎಸ್ 27-41 ಸೀಟುಗಳನ್ನು ಮಾತ್ರ ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
 
ಬಹುತೇಕ ಮಹಿಳಾ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವತ್ತ ಒಲವು ತೋರಿದ್ದಾರೆ. ಶೇ.44 ರಷ್ಟು ಪುರುಷರು ತಾವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುತ್ತೇವೆ ಎಂದಿದ್ದಾರೆ. ಶೇ.33 ರಷ್ಟು ಪುರುಷರು ತಾವು ಬಿಜೆಪಿ ಪರ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ