ವೈದ್ಯರ ಮೇಲೆ ಹಲ್ಲೆ: ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಸೋಮವಾರ, 9 ಜನವರಿ 2017 (15:16 IST)
ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಸಂಸದ ಅನಂತ್ ಕುಮಾರ್ ಹೆಗಡೆ ವೈದ್ಯರ ಮೇಲೆ ಹಲ್ಲೆ ಮಾಡಿರುವುದನ್ನು ಬಿಜೆಪಿ ನಾಯಕರ ಖಂಡಿಸಬೇಕು. ಇಂತಹ ಕೃತ್ಯ ಎಸಗಿರುವ ಸಂಸದರಿಗೆ ನೋಟಿಸ್ ಜಾರಿ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
 
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಸಮಾಜದಲ್ಲಿ ನಡೆದ ಪೈಶಾಚಿಕ ಕೃತ್ಯವಾಗಿದೆ. ಇಂತಹ ಘಟನೆಗಳನ್ನು ಯಾವುದೇ ಸರಕಾರಗಳು ಬೆಂಬಲಿಸುವುದಿಲ್ಲ. ಬದಲಾಗಿ ಈ ಕೃತ್ಯ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕೆಂಬುದು ಕಾಂಗ್ರೆಸ್ ಪಕ್ಷದ ಧ್ಯೇಯವಾಗಿದೆ ಎಂದರು. 
 
ಈ ಹಿಂದೆ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಹಾಗೂ ಆರ್‌ಎಸ್ಎಸ್ ವಿರುದ್ಧ ಮಾತನಾಡಿ ಈಗ ಅದೇ ಪಕ್ಷ ಸೇರಿದ್ದಾರೆ. ಪ್ರಸಾದ್ ಬಿಜೆಪಿ ಸೇರ್ಪಡೆಯಾಗಿ ದೊಡ್ಡ ತಪ್ಪು ಮಾಡಿದ್ದಾರೆ. ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು. 
 
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯರು ಇತರ ರೋಗಿಗಳಿಗೆ ಪರಿಶೀಲಿಸುತ್ತಿದ್ದರು. ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು.
 

ವೆಬ್ದುನಿಯಾವನ್ನು ಓದಿ