ನಟಿ ದೀಪಿಕಾ ಪಡುಕೋಣೆ ಬೆಂಬಲಕ್ಕೆ ನಿಂತ ಕಾಂಗ್ರೆಸ್

ಶನಿವಾರ, 11 ಜನವರಿ 2020 (07:15 IST)
ಕಲಬುರಗಿ : ಜೆಎನ್ ಯು ಗೆ ಭೇಟಿ ನೀಡಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ.


ಜೆಎನ್ ಯು ಗೆ ಭೇಟಿ ನೀಡಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಛಾಪಕ್ ಸಿನಿಮಾ ನೋಡದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುಮಾಡಿದ್ದು, ಈ ಹಿನ್ನಲೆಯಲ್ಲಿ ಕಲಬುರಗಿಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಿರಜ್ ಚಿತ್ರಮಂದಿರದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಯ ಛಾಪಕ್ ಶೋನ ಎಲ್ಲಾ ಟಿಕೆಟ್ ನ್ನು ಬುಕ್ ಮಾಡಿದ್ದಾರೆ. ಅಲ್ಲದೇ ಶಾಸಕ ಪ್ರಿಯಾಂಕ ಖರ್ಗೆ ಕೂಡ ಈ ಸಿನಿಮಾ ನೋಡಲಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ನ ಈ ಪ್ರಯತ್ನ ಆ್ಯಸಿಡ್ ಸಂತ್ರಸ್ತೆಯ ಜೊತೆಗೆ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎನ್ನುವ ಸಂದೇಶ ಕೊಡುತ್ತದೆ. ಅಲ್ಲದೇ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧದ ಪ್ರದರ್ಶನವಾಗಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ