ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ರೆ ಹುಷಾರ್!! ಅತೃಪ್ತರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ
ಶುಕ್ರವಾರ, 8 ಜೂನ್ 2018 (10:14 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತರ ಅಸಮಾಧಾನ ಮುಗಿಲು ಮುಟ್ಟಿದೆ.
ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ಎಸ್ ಆರ್ ಪಾಟೀಲ್ ಮುಂತಾದ ನಾಯಕರು ತಮಗೆ ಸಚಿವ ಸ್ಥಾನ ಸಿಗದೇ ಇರುವ ನಿರಾಶೆಯಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸುತ್ತಿದ್ದಾರೆ. ಇದು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ.
ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ರೆ ತಕ್ಕ ಬೆಲೆ ತೆರಬೇಕಾದೀತು ಎಂದು ಕಾಂಗ್ರೆಸ್ ಹೈಕಮಾಂಡ್ ಅತೃಪ್ತ ನಾಯಕರಿಗೆ ಖಡಕ್ ಸಂದೇಶ ನೀಡಿದೆ. ಅಷ್ಟೇ ಅಲ್ಲದೆ, ಅತೃಪ್ತ ನಾಯಕರು ನಡೆಸುತ್ತಿರುವ ಸಭೆಗಳ ಮೇಲೂ ಕಣ್ಣಿಟ್ಟಿದೆ.
ಸಚಿವ ಸ್ಥಾನ ಸಿಗದೇ ನಿರಾಶೆಯಾಗಿರುವ ನಾಯಕರು ಬೆಂಬಲಿಗರ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಅತ್ತ ಸಚಿವ ಎಂಬಿ ಪಾಟೀಲ್ ಬೆಂಬಲಿಗರು ವಿಜಯಪುರ ಬಂದ್ ಗೆ ತೀರ್ಮಾನಿಸಿದ್ದಾರೆ. ಈ ಹೊಗೆ ಎಲ್ಲಿಯವರೆಗೆ ಮುಟ್ಟುತ್ತದೋ ಕಾದು ನೋಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.