ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ- ಮತ್ತೆ ಕೈ ನಾಯಕರ ವಿರುದ್ಧ ಸಿಡಿದೆದ್ದ ರೋಷನ್ ಬೇಗ್

ಬುಧವಾರ, 22 ಮೇ 2019 (12:02 IST)
ಬೆಂಗಳೂರು : ಹಲವು ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ರೋಷನ್ ಬೇಗ್ ಇದೀಗ ಮತ್ತೆ ಕಾಂಗ್ರೆಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.




ಮಾಜಿ ಶಾಸಕ ರೋಷನ್ ಬೇಗ್ ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಹೇಳಿಕೆ ನೀಡಿ ಕಾಂಗ್ರೆಸ್ ಶಾಸಕರ ಕೆಂಗಣ್ಣಿಗೆ ಗುರಿಯಾಗಿದ್ದರು.


ಇದೀಗ ಟ್ವೀಟ್ ಮಾಡಿರುವ ಬೇಗ್, ಹಲವು ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ. ಸಚಿವರಾದ ಡಿ.ಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೆಜೆ.ಜಾರ್ಜ್ ಸಾಕಷ್ಟು ವರ್ಷದಿಂದ ಪಕ್ಷದಲ್ಲಿದ್ದಾರೆ. ಇವರೆಲ್ಲರ ಬಗ್ಗೆ ನನಗೆ ಅಪಾರ ಗೌರವವಿದೆ. ಇವರೆಲ್ಲರೂ ಕಾಂಗ್ರೆಸ್ ಕಟ್ಟಲು ಶ್ರಮಿಸುತ್ತಿದ್ದಾರೆ. ಆದರೆ ಅವರನ್ನು ಪರ್ಸನಲ್ ಎಟಿಎಂ ರೀತಿ ಬಳಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.


ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಟೀಕಿಸುತ್ತಿದೆ. ಆದರೆ ಸಂಪುಟದ ಪ್ರಮುಖ ಖಾತೆಗಳನ್ನು ಬಿಕರಿ ಮಾಡಲಾಗಿದೆ. ಹಣ ಪಡೆದು ಖಾತೆ ಹಂಚಿರುವ ನಾಯಕರು ಆಪರೇಷನ್ ಕಮಲದ ಬಗ್ಗೆ ಮಾತನಾಡುವುದು ಅಪಹಾಸ್ಯ ಎಂದು ಟ್ವಿಟ್ಟರ್ ನಲ್ಲಿ  ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ