ಮಧು ಬಂಗಾರಪ್ಪ ಸೆಳೆಯಲು ಕಾಂಗ್ರೆಸ್ ಕಸರತ್ತು

ಬುಧವಾರ, 1 ಮಾರ್ಚ್ 2017 (14:22 IST)
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮೂಲಕ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಅವರನ್ನು ಸೆಳೆಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ ಎನ್ನಲಾಗಿದೆ.
 
ಕುಮಾರ್ ಬಂಗಾರಪ್ಪ ಬಿಜೆಪಿಗೆ ಸೇರ್ಪೆಡೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ತಿರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
 
ಕುಮಾರ್ ಬಂಗಾರಪ್ಪ, ಪರಿಮಳ ನಾಗಪ್ಪ ಸೇರಿದಂತೆ ಅನೇಕ ಮುಖಂಡರು ಪಕ್ಷಾಂತರ ಪರ್ವಕ್ಕೆ ಆರಂಭ ನೀಡಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಕಾಂಗ್ರೆಸ್, ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ನೀಡಿರುವ ಹೇಳಿಕೆ ಇತರ ಪಕ್ಷಗಳಲ್ಲಿ ತಳಮಳ ಮೂಡಿಸಿದೆ.
 
ಯಡಿಯೂರಪ್ಪ ನೇತೃತ್ವದ ಬಿಜೆಪಿಗೆ ಸರಿಯಾದ ಸಮಯದಲ್ಲಿ ತಕ್ಕ ಪಾಠ ಕಲಿಸಲು ಕೂಡಾ ಕಾಂಗ್ರೆಸ್ ಪ್ರತಿತಂತ್ರ ರೂಪಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ