ಕುದ್ರೋಳಿ ಕ್ಷೇತ್ರದಲ್ಲಿ ಉರುಳು ಸೇವೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೆ.ಜೆ.ಜಾರ್ಜ್ ಅವರನ್ನು ಉಳಿಸಲು ಎಲ್ಲರೂ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಬದಲಿಗೆ ಸಿಐಡಿ ತನಿಖೆಗೆ ಒಪ್ಪಿಸಿದ್ದರ ಹಿಂದೆ ಯಾವ ಷಡ್ಯಂತ್ರ ಇತ್ತು ಎನ್ನುವುದು ಈಗ ಜನರಿಗೆ ಅರಿಯಾಗಿದೆ. ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಎನ್ನೆಲ್ಲ ಕಸರತ್ತು ಮಾಡಿದ್ದರು. ಇನ್ನು ಎಷ್ಟು ಕಾಲ ಆರೋಪಿಗಳನ್ನು ರಕ್ಷಿಸಲು ಸಾಧ್ಯ. 2018ರ ನಂತರ ಬರುವ ಹೊಸ ಸರಕಾರ ಈ ಕುರಿತು ಮರುತನಿಖೆ ನಡೆಸಬಹುದು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.