ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ

ಗುರುವಾರ, 9 ಮಾರ್ಚ್ 2017 (15:07 IST)
ಅಕಸ್ಮಿಕವಾಗಿ ಉಪಚುನಾವಣೆ ಬಂದಿವೆ. ನಂಜನಗೂಡು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾದ ನಂಜನಗೂಡು ಮತ್ತು ಮಹದೇವ್ ಪ್ರಸಾದ್ ನಿಧನದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯಲ್ಲಿ ಉಪಚುನಾವಣೆ ನಡೆಯಲಿವೆ. 
 
ನಂಜನಗೂಡು ಗುಂಡ್ಲುಪೇಟೆ ನಮ್ಮ ಕ್ಷೇತ್ರಗಳೇ. ಉಪಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಲ್ಲ ಎಂದು ತಿಳಿಸಿದ್ದಾರೆ.
 
ಮತ್ತೊಂದೆಡೆ ರಾಜ್ಯದಲ್ಲಿ ಬಿಜೆಪಿಗೆ ಪೂರಕವಾದ ವಾತಾವರಣವಿರುವುದರಿಂದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು 100ಕ್ಕೆ ನೂರರಷ್ಟು ಖಚಿತ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ