ಪ್ರತಾಪ್ ಸಿಹ ವಿರುದ್ಧ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು

ಗುರುವಾರ, 14 ಡಿಸೆಂಬರ್ 2023 (14:20 IST)
ನಿನ್ನೆ ಸಂಸತ್‌ನಲ್ಲಿ ಭದ್ರತಾ ವೈಪಲ್ಯ ಹಿನ್ನೆಲೆ ಸಂಸದ ಪ್ರತಾಪ್ ಸಿಂಹನನ್ನು ಬಂಧಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ.
 
ಸಂಸದ ಪ್ರತಾಪ್ ಸಿಂಹರನ್ನ ಕೂಡಲೇ ಬಂಧಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.ಅಲ್ಲದೇ ಭಯೋತ್ಪಾದಕರನ್ನ ಬೆಂಬಲಿಸುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
 
ನಕ್ಸಲೆಟ್ ವೇಷದಲ್ಲಿರುವ ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ