ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆಗೆ ಭಾರತ ಸರ್ಕಾರ ಪಾಕ್ ನ ಗುರಿಮಾಡುವುದು ತಪ್ಪು- ಕಾಂಗ್ರೆಸ್ ವಕ್ತಾರನ ವಿವಾದಾತ್ಮಕ ಹೇಳಿಕೆ

ಸೋಮವಾರ, 18 ಫೆಬ್ರವರಿ 2019 (11:34 IST)
ವಿಜಯಪುರ : ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಯುತ್ತಿರುವುದಕ್ಕೆ ಭಾರತ ಸರ್ಕಾರ ಪಾಕ್ ಹಾಗೂ ಮುಸ್ಲೀಂರ ಮೇಲೆ ಗುರಿಮಾಡಿ ಮಾತಾಡುವುದು ತಪ್ಪು ಎಂದು ಕಾಂಗ್ರೆಸ್ ವಕ್ತಾರ ಎಸ್.ಎಂ ಪಾಟೀಲ್ ಗಣಿಹಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಡೆದ ಘಟನೆಗೆ ಗೌರ್ನರ್ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅದರ ಕುರಿತು ಸಮಗ್ರ ತನಿಖೆ ಆಗಬೇಕು. ಕಳೆದ 30 ವರ್ಷಗಳಿಂದ ಕೂಡಾ ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಯುತ್ತಿದೆ. ಹೀಗಾಗಿ ಅದರ ಮೂಲ ಎಲ್ಲಿದೆ ಎಂದು ಕಂಡು ಹಿಡಿಯಬೇಕು. ಅದನ್ನು ಬಿಟ್ಟು ಪಾಕ್ ಹಾಗೂ ಮುಸ್ಲೀಂರ ಮೇಲೆ ಬೊಟ್ಟು ಮಾಡಿ ತೋರಿಸುವುದರಿಂದ ಉಪಯೋಗವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಎಸ್.ಎಂ ಪಾಟೀಲ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಅವರ ವಿರುದ್ಧ ದೂರು ದಾಖಲಿಸಲು ದೇಶಭಕ್ತರು ಆಗ್ರಹಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ