ರಾಜ್ಯಗಳನ್ನ ಪರಿಗಣಿಸಿ ಕರ್ನಾಟಕ ಸ್ತಬ್ಧಚಿತ್ರ ಕೈಬಿಟ್ಟಿದ್ದಾರೆ!

ಸೋಮವಾರ, 9 ಜನವರಿ 2023 (09:59 IST)
ಬೆಂಗಳೂರು : ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದಕ್ಕೆ ಸ್ತಬ್ದಚಿತ್ರ ನೋಡೆಲ್ ಅಧಿಕಾರಿ ಸಿ.ಆರ್.ನವೀನ್ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. 

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿಲ್ಲ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ