ಸಂವಿಧಾನಕ್ಕೆ ಆರ್‌ಸ್ಸೆಸ್ಸೆನಿಂದ ಅಪಾಯವಿದೆ: ಸಿಎಂ ಸಿದ್ದರಾಮಯ್ಯ

Sampriya

ಭಾನುವಾರ, 14 ಏಪ್ರಿಲ್ 2024 (15:12 IST)
Photo Courtesy X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೇಳಬೇಕಾಗಿರುವುದು 'ಯಾವ ಆರ್‌ಸ್ಸೆಸ್ಸೆ ನಾಯಕರೂ ಹೇಳಿದರೂ ಸಂವಿಧಾನವನ್ನು ಬದಲಾಯಿಸಲ್ಲ ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಅಂಬೇಡ್ಕರ್ ದಿನದ ಪ್ರಯುಕ್ತ ಪ್ರಧಾನಿ ಮೋದಿ ಅವರು,  'ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ' ಎಂದು ಹೇಳಿದ್ದರು.

ಇವರ ಹೇಳಿಕೆ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ' ಎಂದು ಪ್ರಧಾನಿ @narendramodi ಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, 'ಯಾವ ಆರ್ ಎಸ್ ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ' ಎಂದು  ಹೇಳಬೇಕಾಗಿತ್ತು.

ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಅವರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ