ಹುಬ್ಬಳ್ಳಿ : ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್ಪೋರ್ಟ್ ನಿರ್ಮಾಣ ಮಾಡಲು ನಮ್ಮ ಸರ್ಕಾರ ಮುಂದಾಗಿದ್ದು,
ದಾವಣಗೆರೆ, ಬಾಗಲಕೋಟೆ, ಬಾದಾಮಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರಿನಲ್ಲಿ ಏರ್ಪೋರ್ಟ್ ನಿರ್ಮಾಣ ಆರಂಭಗೊಳ್ಳಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜಾಗತಿಕ ಸಮಾವೇಶ ಪ್ರಾರಂಭವಾಗಲಿದೆ. ಕಳೆದ ಒಂದು ವರ್ಷದಿಂದ ತಯಾರಿ ಆರಂಭವಾಗಿದೆ.
ನವೆಂಬರ್ನಲ್ಲಿ ಜಾಗತಿಕ ಸಮಾವೇಶ ನಡೆಯಲಿದೆ. ಕರ್ನಾಟಕಕ್ಕೆ ಅತೀ ಹೆಚ್ಚು ಬಂಡವಾಳ ಬಂದಿದೆ ಇದು ಹೆಮ್ಮೆಯ ವಿಷಯ. ನಾವು ಅನೇಕ ಕಡೆ ಕರ್ನಾಟಕದ ಕೈಗಾರಿಕಾ ನೀತಿ ತಿಳಿಸಿದ್ದೇವೆ. 5 ಲಕ್ಷ ಜನರಿಗೆ ಉದ್ಯೋಗ ಸಿಗುವ ಪ್ರಯತ್ನ ನಾವು ಮಾಡಿದ್ದೇವೆ.
ಕರ್ನಾಟಕಕ್ಕೆ ಐದು ಲಕ್ಷ ಕೋಟಿ ರೂ. ಬರಲಿದೆ. ಕೈಗಾರಿಕೆಗಾಗಿ 50 ಸಾವಿರ ಎಕರೆ ಭೂಮಿ ವಶಪಡಿಸಿಕೊಳ್ಳಲಾಗಿದೆ.