ಏರ್‌ಪೋರ್ಟ್ ಸಿಟಿಯಲ್ಲಿ ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ ಗ್ರಾಮ ನಿರ್ಮಾಣ ಶುರು!

ಗುರುವಾರ, 7 ಅಕ್ಟೋಬರ್ 2021 (21:03 IST)
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ತಲೆ ಎತ್ತುತ್ತಿರುವ “ಏರ್‌ಪೋರ್ಟ್ ಸಿಟಿ” ಭಾಗವಾಗಿ “ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ (ಆರ್‌ಡಿಇ) ಗ್ರಾಮ (ಮನರಂಜನಾ ಗ್ರಾಮ) ನಿರ್ಮಿಸಲು ಡಿಪಿ ಆರ್ಕಿಟೆಕ್ಟ್ ಸಿಂಗಾಪುರ ಆಂಡ್ ಪೋರ್ಟ್‌ಲ್ಯಾಂಡ್‌ ಡಿಸೈನ್ ಯುಕೆ ಸಂಸ್ಥೆ ಆರ್ಕಿಟೆಕ್ಟ್ ವಿನ್ಯಾಸಕ್ಕಾಗಿ ನೇಮಕ ಮಾಡಲಾಗಿದೆ.
 
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ ಅಧೀನ ಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (ಬಿಎಸಿಎಲ್) ಈಗಾಗಲೇ ಏರ್‌ಪೋರ್ಟ್ ಸಿಟಿ ನಿರ್ಮಾಣದ ಕೆಲಸ ಪ್ರಾರಂಭಿಸಿದೆ. ಇದರ  ಭಾಗವಾಗಿ ಮನರಂಜನಾ  ಗ್ರಾಮವನ್ನು 23 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ಈ ಜವಾಬ್ದಾರಿಯನ್ನು ಪೋರ್ಟ್‌ಲ್ಯಾಂಡ್‌ ಡಿಸೈನ್ ಯುಕೆ ಸಂಸ್ಥೆಗೆ ನೀಡಲಾಗಿದೆ. ಈ ಭಾಗದಲ್ಲಿ ಶಾಪಿಂಗ್ ಸೆಂಟರ್, ಮಾಲ್, ಐಟೆಕ್ ಸಿನಿಮಾ ಥಿಯೇಟರ್ ಸೇರಿದಂತೆ ಇತರೆ ಮನರಂಜನಾ ಸ್ಥಳಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ.  
 
ಈ ಬಗ್ಗೆ ಮಾತನಾಡಿದ ಬಿಎಎಸಿಎಲ್ ಸಿಇಒ ಶ್ರೀ ರಾಮ್ ಮುನುಕುಟ್ಲಾ, ಸಿಂಗಾಪುರ ಮಾದರಿಯ ಸಿಟಿ ನಿರ್ಮಾಣದ ಕನಸಿನಂತೆ ಈ ಭಾಗದಲ್ಲಿ ಏರ್‌ಪೋರ್ಟ್ ಸಿಟಿ ನಿರ್ಮಿಸಲಾಗುತ್ತಿದೆ. ಮನರಂಜನಾ ಗ್ರಾಮವನ್ನು ನಿರ್ಮಿಸಲು ಈಗಾಗಲೇ ಟೆಂಡರ್ ನೀಡಲಾಗಿದೆ. ಕೆಲವೇ ವರ್ಷಗಳಲ್ಲಿ ಈ ತಾಣ ತಲೆ ಎತ್ತಲಿದೆ. ಈ ಮನರಂಜನಾ  ಗ್ರಾಮಕ್ಕೆ ಬಿಎಂಟಿಸಿ, ಮೆಟ್ರೋ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಸಂಪರ್ಕ ಸಹ ಇರಲಿದೆ. ಈ  ಹೈಟೆಕ್ ಸಿಟಿಯಲ್ಲಿ ಬ್ಯುಸಿನೆಸ್ ಪಾರ್ಕ್, ಐಟಿ ಪಾರ್ಕ್, ಹಾಸ್ಪೆಟಲ್ ಸೆಂಟರ್, ಶಾಲಾ ಕಾಲೇಜುಗಳು, ಪ್ರದರ್ಶನ ಕೇಂದ್ರ ಹೀಗೆ ಹತ್ತಾರು ವಿಷಯಗಳು ಈ ಸಿಟಿಯಲ್ಲಿ ಇರಲಿದೆ. ಇದೊಂದು ದೇಶದಲ್ಲೇ  ಮಾದರಿ ಹೈಟೆಕ್ ಸಿಟಿಯಾಗಿ ಹೊರಬರುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ,
city

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ