ಕಲುಷಿತ ಆಹಾರ ಸೇವನೆ; 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಬುಧವಾರ, 8 ಜುಲೈ 2015 (09:30 IST)
ಕಲುಷಿತ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹೆಬ್ಬಾಳ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. 
 
ಅಸ್ವಸ್ಥ ಮಕ್ಕಳನ್ನು ತತ್‌ಕ್ಷಣ ಆಂಬ್ಯುಲೆನ್ಸ್‌ ಹಾಗೂ ಖಾಸಗಿ ವಾಹನಗಳ ಮೂಲಕ ರಾತ್ರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  
 
ನಿನ್ನೆ ರಾತ್ರಿಯೂಟ ಸೇವಿಸಿದ ನಂತರ ಮಕ್ಕಳು ಏಕಾಏಕಿ ಅಸ್ವಸ್ಥರಾಗಿದ್ದಾರೆ.
 
ಹಲ್ಲಿ ಬಿದ್ದಿದ್ದ ಸಾಂಬಾರ್ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಕುರಿತು ಗಂಭೀರ ತನಿಖೆಗೆ ಆದೇಶಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. 
 
ಮಾಡಬೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವೆಬ್ದುನಿಯಾವನ್ನು ಓದಿ