ಜುಲೈ 14 ರಂದು ಕರ್ನಾಟಕ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಯೋಜನೆಗೆ ಚಾಲ್ತಿ ನೀಡಿದ್ದಾರೆ.ಈ ಯೋಜನೆ ಜಾರಿಗೆ ಬಂದಲ್ಲಿ ಆಟೋ, ಟ್ಯಾಕ್ಸಿ ಚಾಲಕರ ಜೀವನದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯಪಾಲರು, ಮುಖ್ಯಮಂತ್ರಿ, ಸಾರಿಗೆ ಸಚಿವರ ಹಾಗೂ ಇಲಾಖೆ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ, ಯಾವುದೇ ಕಾರಣಕ್ಕೂ ಬೈಕ್ ಟ್ಯಾಕ್ಸಿ ಯೋಜನೆಗೆ ಅವಕಾಶ ಕೊಡಬಾರದು, ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದೇವೆ. ಲಕ್ಷಾಂತರ ಟ್ಯಾಕ್ಸಿ ಆಟೋ ಚಾಲಕರು ಬದುಕಿಗೆ ಅನುಕೂಲಕರ ವ್ಯವಸ್ಥೆ ಮಾಡಿಕೊಡಬೇಕೆಂದು ತೆರಿಗೆ ಕಟ್ಟುವ ಖಾಸಗಿ ವಾಣಿಜ್ಯ ಚಾಲಕರ ಹೊಟ್ಟೆ ಮೇಲೆ ಹೊಡೆಯಬೇಡಿ, ನಮ್ಮ ಚಾಲಕರು ಟ್ರೇಡ್ ಯೂನಿಯನ್ ಸಂಸ್ಥಾಪಕ ಸೋಮಶೇಖರ್ ವಿನಂತಿಸಿದ್ದಾರೆ.