ತಮಿಳುನಾಡಿನಲ್ಲಿ ಮುಂದುವರಿದ ಮಳೆ

ಭಾನುವಾರ, 13 ನವೆಂಬರ್ 2022 (15:12 IST)
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೆಲವೆಡೆ ಮನೆಗಳು ಜಲಾವೃತವಾಗಿವೆ. ಒಟ್ಟು 27 ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಳೆಯಿಂದಾಗಿ ರಜೆ ಘೋಷಿಸಲಾಗಿದೆ. ಚೆನ್ನೈ, ಚೆಂಗಲ್‌ಪೇಟ್, ಕಾಂಚೀಪುರಂ, ತಿರುವಳ್ಳೂರು ಮತ್ತು ವಿಲ್ಲುಪುರಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶ್ರೀಲಂಕಾ ಕರಾವಳಿ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರ್​ನಲ್ಲಿ ಭಾರೀ ಮಳೆಯಾಗುತ್ತಿದೆ. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ನೀಲಗಿರಿ, ಕೊಯಮತ್ತೂರು,ಕಡಲೂರು, ಈರೋಡ್, ಕನ್ಯಾಕುಮಾರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಏತನ್ಮಧ್ಯೆ, ನೆರೆಯ ಪುದುಚೇರಿಯಲ್ಲಿ ರಾತ್ರಿಯಿಂದ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಪುದುಚೇರಿ  ಪ್ರದೇಶಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಪ್ರಾದೇಶಿಕ ಸರ್ಕಾರ ರಜೆ ಘೋಷಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ