ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ

ಗುರುವಾರ, 27 ಜುಲೈ 2023 (17:40 IST)
ರಾಜ್ಯಾಧ್ಯನಂತ ಮುಂದಿನ ಮೂರು ದಿನಗಳ ಕಾಲ ಮಹಾ ಮಳೆ ಮುಂದುವರೆದಿದೆ.ನಿಲ್ಲದ ಮಹಾ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.ವರುಣಾರ್ಭಟಕ್ಕೆ  ಕರುನಾಡು ತತ್ತರಿಸಿದೆ. ಇಂದು 11 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದೂ ಕೂಡ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗಲಿದೆ.ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
 
ಇಂದೂ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ವಿಜಯನಗರ, ಕೊಪ್ಪಳ, ದಾವಣಗೆರೆ ಬೀದರ್, ಬಳ್ಳಾರಿ, ರಾಯಚೂರು, ಧಾರವಾಡ, ಬೆಳಗಾವಿ, ಚಿಕ್ಕಮಗಳೂರಿನ 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು,ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಮಳೆಯ ಅಬ್ಬರ ಮುಂದುವರೆಯಲಿದೆ.ಉತ್ತರ ಒಳನಾಡಿನಲ್ಲಿ ಬೆಳಗಾವಿ, ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಬೀದರ್ ಮತ್ತು ಕಲಬುರಗಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ