ಕಳೆದ ಒಂದೆರಡು ದಿನಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾದಂತಿದ್ದ ಮಳೆ ಪುನಃ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಿರುವುದು ಪ್ರವಾಹ ಪೀಡಿತರನ್ನ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಪರಿಹಾರ ಕಾರ್ಯ ಒಂದೆಡೆ ನಡೆಯುತ್ತಿರುವ ಮಧ್ಯೆಯೇ ಮಳೆ ತುಸು ಕಡಿಮೆಯಾದಂತಿತ್ತು. ಆದರೆ ಈಗ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ಹೀಗಾಗಿ ನಿರಂತರ ಮಳೆ ಪರಿಹಾರ ಕಾರ್ಯಕ್ಕೆ ಅಡ್ಡಿಯನ್ನು ಮಾಡುತ್ತಿದೆ. ಅಷ್ಟೇ ಅಲ್ಲ, ಅಂದಾಜು 600ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾವಿರಾರು ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ.
ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ, ಪುನರ್ ನಿರ್ಮಾಣ ಕೆಲಸ ನಡೆಯುತ್ತಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವುಗೊಳಿಸುವಲ್ಲಿ ರಕ್ಷಣಾ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ.