ಗುತ್ತಿಗೆದಾರರು ಪರ್ಸಂಟೇಜ್ ಕೊಡುವುದು ನಿಲ್ಲಿಸಿ : ಎಚ್‍ಡಿಕೆ

ಮಂಗಳವಾರ, 29 ಮಾರ್ಚ್ 2022 (09:33 IST)
ಬೆಂಗಳೂರು : ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಕುಮಾರಸ್ವಾಮಿ,

ರಾಜ್ಯ ಸರ್ಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರಕ್ಕೆ ಬಂದಿರುವುದೇ ಕಮಿಷನ್ ವಿಚಾರ. ಈಗ ಹೊರಗೆ ಬರುತ್ತಿರುವ ವಿಷಯಗಳ ಬಗ್ಗೆ ಅಚ್ಚರಿ ಏನೂ ಇಲ್ಲ. ಇದು ಒಂದು ರೀತಿಯ ದಿನನಿತ್ಯದ ಕೆಲಸ ಆಗಿಹೋಗಿದೆ.

ಹಿಂದೆ ಸಣ್ಣಪುಟ್ಟ ಮಟ್ಟದಲ್ಲಿ ಇಂಥದ್ದೆಲ್ಲ ನಡೆದುಕೊಂಡು ಹೋಗುತ್ತಿತ್ತು. ಈಗ ಸ್ವಲ್ಪ ದೊಡ್ಡ ಪ್ರಮಾಣಕ್ಕೆ ಏರಿಕೆ ಆಗಿದೆ. ಏಕೆಂದರೆ, ಬಜೆಟ್ ಗಾತ್ರ ಹೆಚ್ಚಾದಂತೆ ಕಮಿಷನ್ ಗಾತ್ರ ಕೂಡ ಹೆಚ್ಚಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. 

40% ಪರ್ಸಂಟೇಜ್ ಅಂತ ಎಲ್ಲರೂ ಹೇಳುತ್ತಾರೆ. ಆದರೆ, ನೀವು ಮೊದಲು ನಾವು ಯಾವುದೇ ಕೆಲಸ ಮಾಡಲ್ಲ, ಕಮಿಷನ್ ಕೊಡಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡಿ. ಆಗ ಎಲ್ಲವೂ ಸರಿ ಹೋಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ