ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ: ಸಿಎಂ

ಗುರುವಾರ, 6 ಜನವರಿ 2022 (06:47 IST)
ಬೆಂಗಳೂರು : ನಗರದ ಬಿಜೆಪಿ ಮುಖಂಡರು ಮತ್ತು ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಮುಖಂಡರ ಜೊತೆ ಬುಧವಾರ ಸಭೆ ನಡೆಸಿ ಮಾತನಾಡಿದ ಅವರು, ನಗರ ಮತ್ತು ರಾಜ್ಯದಲ್ಲಿ ಮುಂದಿನ ಕೆಲವು ವಾರಗಳಲ್ಲಿ ಕೋವಿಡ್ ಪ್ರಮಾಣ ತೀವ್ರವಾಗಿ ಹೆಚ್ಚುವ ಸಾಧ್ಯತೆ ಇದೆ.

ಇದರ ನಿಗ್ರಹಕ್ಕೆ ಜನ ಜಾಗೃತಿ, ವಾರ್ಡ್ ಮಟ್ಟದಲ್ಲಿ ವಾರ್ ರೂಂ, ಕಾಲ್ ಸೆಂಟರ್ ಮಾಡಿ ಜನರ ಸೇವೆಯಲ್ಲಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. 

ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ಸಂಸದರು ಹಾಗೂ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಭಾಗವಹಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ