ಮಿಷನರಿ ಶಾಲೆಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಿದ ಗೃಹ ಸಚಿವ

ಸೋಮವಾರ, 16 ಮೇ 2022 (17:20 IST)
ಮಧ್ಯಪ್ರದೇಶದಲ್ಲಿ ದಿನದಿಂದ ದಿನಕ್ಕೆ ಮತಾಂತರ ಪ್ರಕರಣಗಳ ಕುರಿತು ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮಿಷನರಿ ಶಾಲೆಗಳ ಮೇಲೆ ನಿಗಾ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ || ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ರಾಜಧಾನಿ ಭೋಪಾಲ್ನ ಕ್ರೈಸ್ಟ್ ಮೆಮೋರಿಯಲ್ ಶಾಲೆಯಲ್ಲಿ ಮತಾಂತರ ಪ್ರಕರಣ ಬೆಳಕಿಗೆ ಬಂದ ನಂತರ ಗೃಹ ಸಚಿವರು ಆದೇಶಿಸಿದ್ದಾರೆ.
ಶಾಲೆಯ ಆವರಣದಲ್ಲಿ ಹಿಂದು ಪುರುಚ ಹಾಗು ಮಹಿಳೆಯನ್ನ ಮತಾತಂತರ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದಾರೆ.
ಮುಂದುವರೆದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ವಯಂಪ್ರೇರಿತರಾಗಿ FIRಅನ್ನು ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಲಾಗಿದೆ. ಇದೇ ವೇಳೆ ರಾಜ್ಯ ಗುಪ್ತಚರ ಇಲಾಖೆಯು ಎಲ್ಲಾ ಮಿಷನರಿ ಶಾಲೆಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಿದೆ ಎಂದು ತಿಳಿಸಿದ್ದಾರೆ. 
 
ಭೋಪಾಲ್ ನಿವಾಸಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣವನ್ನ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ