ಸುಪ್ರೀಂ ಕೋರ್ಟ್ಗೆ ಕೆಆರ್ಎಸ್ ಚಿತ್ರಣ ಮನವರಿಕೆ ಮಾಡಿ

ಗುರುವಾರ, 14 ಸೆಪ್ಟಂಬರ್ 2023 (13:29 IST)
ಮಂಡ್ಯ : ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದನ್ನು ಮುಂದಿನ ವಿಚಾರಣೆ ಸೆ.21ರಂದು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು.
 
ಇಲ್ಲಿಯವರೆಗೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿಲ್ಲ ಎಂದು ರೈತ ಹಿತರಕ್ಷಣಾ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತ ಹಿತರಕ್ಷಣಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ಆದೇಶ ಎಂದು ಮತ್ತೆ ನೀರು ಬಿಟ್ಟರೆ ಕುಡಿಯುವ ನೀರು ಸಿಗುವುದಿಲ್ಲ. ಆದ್ದರಿಂದ ನಮ್ಮಲ್ಲಿ ಆತಂಕ ಮುಂದುವರೆದಿದೆ. ಇದರಿಂದಾಗಿ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ರಾಜ್ಯ ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ