ರಾಜ್ಯದಲ್ಲಿ ಕಳೆದ 2 ವಾರಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೋವಿಡ್ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಇತರೆ ರಾಜ್ಯಗಳಲ್ಲಿ ಯಶಸ್ವಿಯಾಗಿ ಅನುಸರಿಸುತ್ತಿರುವ ಕ್ರಮಗಳ ಕುರಿತಂತೆ ಪರಿಣಿತರ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ ಕೆಲವು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಖಾಸಗಿ ವಲಯದ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ತೆಗೆದುಕೊಂಡು ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದರು.
ಕೊರೋನ ಚಿಕಿತ್ಸೆಯ ವ್ಯವಸ್ಥೆ ಇರುವಂತಹ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದಾರೆ.