ಭಾರತದಲ್ಲಿ ಕೊರೋನಾ ಮತ್ತಷ್ಟು ಇಳಿಕೆ:ಮತ್ತೆ 50 ಸಾವಿರದತ್ತ ಪ್ರಕರಣ, 804 ಮಂದಿ ಸಾವು
ಶನಿವಾರ, 12 ಫೆಬ್ರವರಿ 2022 (20:06 IST)
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50,407 ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 804 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,25,86,544ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,04,866ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,10,443ಕ್ಕೆ ತಲುಪಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,10,443ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,36,962 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,14,68,120ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 14,91,678 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,78,70,047 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ1,72,29,47,688 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.