ಗಣೇಶೋತ್ಸವ ಮೇಲೆ ಕೊರೊನಾ ಎಫೆಕ್ಟ್ : ಸಚಿವ ಹೇಳಿದ್ದೇನು?
ಕೊರೊನಾ ತಡೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದ್ದು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 9 ಸಾವಿರ ಜನರ ಗಂಟಲು ದ್ರವದ ಮಾದರಿ ಪರೀಕ್ಷೆ ಮಾಡಲಾಗಿದೆ. ಕೊವಿಡ್-19 ಚಿಕಿತ್ಸೆಗಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 922 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.
ಈ ವರ್ಷದ ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಸಚಿವರು ಹೇಳಿದ್ದಾರೆ.