ಬೆಂಗಳೂರು : ಒಮಿಕ್ರಾನ್ ಆತಂಕದ ಬೆನ್ನಲ್ಲೇ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಕೊರೊನಾ ಸ್ಪೋಟವಾಗಿದ್ದು, ಕಳೆದ 12 ದಿನಗಳಲ್ಲಿ ಒಟ್ಟು 501 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚಿಕ್ಕಮಗಳೂರು, ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸೀಗೋಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 62 ವಿದ್ಯಾರ್ಥಿಗಳಿಗೆ, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸ್ಪೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 7 ಮತ್ತು ದಿ ಇಂಟರ್ ನ್ಯಾಷನಲ್ ಸ್ಕೂಲಿನಲ್ಲಿ 5 ಮಂದಿಗೆ ಕೊರೊನಾ ಸೋಮಕು ದೃಢಪಟ್ಟಿದೆ.